ರೇಣುಕಾ ಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ; ಕೋರ್ಟ್‌ನಿಂದ ಜಾರಿಯಾದ ಆರ್ಡರ್ ಏನು? Darshan Thoogudeepa Arrest:

Darshan Thoogudeepa Arrest: ಚಿತ್ರದುರ್ಗ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಅವರನ್ನು ಬಂಧಿಸಿ, ವಿಚಾರಣೆ ಮಾಡಲಾಗುತ್ತಿದೆ. ಈಗಾಗಲೇ ಈ ಪ್ರಕರಣದಲ್ಲಿ ಹಲವು ಮಂದಿಯನ್ನು ಅರೆಸ್ಟ್ ಮಾಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಈ ನಡುವೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಮೊದಲ ಬಾರಿಗೆ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Darshan Thoogudeepa Arrest
Darshan Thoogudeepa Arrest

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ, ವಿನಯ್, ನಾಗರಾಜ್ ಸೇರಿದಂತೆ 19 ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಇವರೆಲ್ಲರ ವಿಚಾರಣೆ ಮುಂದುವರಿದಿದೆ. ಈ ಮಧ್ಯೆ ರೇಣುಕಾ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಮೊದಲಿಗೆ, ಶ್ರೀ ರೇಣುಕಾ ಸ್ವಾಮಿ ಅವರ ಕುಟುಂಬಸ್ಥರಿಗೆ ನಾನು ಹೃದಯಪೂರ್ವಕ ಸಾಂತ್ವನವನ್ನು ತಿಳಿಸಲು ಬಯಸುತ್ತೇನೆ. ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಮನೆಯವರಿಗೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ವಿಜಯಲಕ್ಷ್ಮೀ ದರ್ಶನ್ ತಿಳಿಸಿದ್ದಾರೆ.

ಕಪೋಲಕಲ್ಪಿತ ಸುದ್ದಿ ಪ್ರಸಾರಕ್ಕೆ ತಡೆಯಾಜ್ಞೆ Darshan Thoogudeepa Arrest:

ಇದರ ಜೊತೆಗೆ ವಿಜಯಲಕ್ಷ್ಮೀ ದರ್ಶನ್ ಅವರು ನ್ಯಾಯಾಲಯದಿಂದ ತಡೆಯಾಜ್ಞೆಯೊಂದನ್ನು ತಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಪೋಲಕಲ್ಪಿತ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿರುವ ಪ್ರತಿಯನ್ನು ಹಂಚಿಕೊಂಡಿರುವ ವಿಜಯಲಕ್ಷ್ಮೀ ದರ್ಶನ್, “ಕಳೆದ ಕೆಲವು ದಿನಗಳಲ್ಲಿ, ದರ್ಶನ್ ಅವರು, ನಾನು, ನಮ್ಮ ಮಗ, ದರ್ಶನರ ಸೆಲೆಬ್ರಿಟೀಸ್ ಮತ್ತು ಕುಟುಂಬದವರು ಪದಗಳಲ್ಲಿ ವಿವರಿಸಲಾಗದ ನೋವನ್ನು ಅನುಭವಿಸಿದ್ದೇವೆ” ಎಂದು ಹೇಳಿಕೊಂಡಿದ್ದಾರೆ.

“ಗೌರವಾನ್ವಿತ ನ್ಯಾಯಾಲಯದ ಮೇಲ್ಕಂಡ ಆದೇಶದಂತೆ, ಇನ್ನು ಮುಂದಾದರೂ ಅಸತ್ಯಗಳು ಹಾಗೂ ಅನಧಿಕೃತ ಮಾಹಿತಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗದಿರಲಿ ಎಂದು ಕೇಳಿಕೊಳ್ಳುತ್ತೇನೆ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಸತ್ಯಮೇವ ಜಯತೆ” ಎಂದು ವಿಜಯಲಕ್ಷ್ಮೀ ಹೇಳಿದ್ದಾರೆ.” ಎಂದು ವಿಜಯಲಕ್ಷ್ಮೀ ತಿಳಿಸಿದ್ದಾರೆ.

ಹಾಗೆ ಈ ಬಗ್ಗೆ ಬೇರೆ ಬೇರೆ ದೊಡ್ಡ ವಕ್ತಿಗಳಿಂದ ರೇಣುಕಾ ಸ್ವಾಮಿಯ ಕುಂಟುಂಬದವರಿಗೆ ಸಾಂತ್ವನ ನೀಡಬಲ್ಲ ಮಾತುಗಳನ್ನು ಸಹ ಆಡಿದರೆ. ಅದೇ ರೀತಿಯಲ್ಲಿ ದರ್ಶನ’ರ ಪತ್ನಿಯಾದ ವಿಜಯಲಕ್ಷ್ಮಿ ಹೇಳಿದರೆ.

Post a Comment

Previous Post Next Post